ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಇಂದು ನಗರದ ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Advertisement
ಈ ಸಂದರ್ಭದಲ್ಲಿ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಡಾ. ಭಾಗವತ್ ಅವರೊಂದಿಗೆ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ ಹಾಗೂ ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ನವೆಂಬರ್ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಾ.ಮೋಹನ್ ಭಾಗವತ್ ಮಾತನಾಡಲಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.


