ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವಕರ್ಮ ಸಮಾಜದ ಪ್ರಮುಖರು, ಸಮಾಜ ಸೇವಕರು ಹಾಗೂ ಶ್ರೀಕ್ಷೇತ್ರ ವರವಿ ಮೌನೇಶ್ವರ ದೇವಸ್ಥಾನ ಹಾಗೂ ಮಠದ ಟ್ರಸ್ಟ್ ಕಮಿಟಿ ಅಧ್ಯಕ್ಷರಾದ ಮೋಹನ್ ಎಸ್. ನರಗುಂದ ಅವರು ಶ್ರೀವಿಶ್ವಕರ್ಮ ಸೇವಾ ಪ್ರತಿಷ್ಠಾನ ಬೆಂಗಳೂರು ಇವರು ಸಮಾಜಸೇವೆ, ಶಿಲ್ಪಕಲೆ, ಕಮ್ಮಾರಿಕೆ, ಮರಗೆಲಸ ಹಾಗೂ ಚಿನ್ನಾಭರಣ ಕೆಲಸ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ `ಶ್ರೀಮೌನೇಶ್ವರ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Advertisement
ಸೆಪ್ಟೆಂಬರ್ 26ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀವಿಶ್ವಕರ್ಮ ಸೇವಾ ಪ್ರತಿಷ್ಠಾನ ಹಮ್ಮಿಕೊಂಡಿರುವ ಶ್ರೀವಿರಾಟ್ ವಿಶ್ವಕರ್ಮ ಮಹೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ವಿಶ್ವಕರ್ಮ ಸೇವಾ ಪ್ರತಿಷ್ಠಾನದ ರಾಜ್ಯ ಕಾರ್ಯಾಧ್ಯಕ್ಷ ಡಾ. ಬಿ.ಎಂ. ಉಮೇಶಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.