ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರನ್ನುಜಾರಿ ನಿರ್ದೇಶನಾಲಯ ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆರೋಪದ ಮೇಲೆ ಬಂಧಿಸಿತ್ತು. ಇದೀಗ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
Advertisement
ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಕೋರ್ಟ್ ಸೂಚಿಸಿದೆ.
ಇದರೊಂದಿಗೆ ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ.