ಬೆಂಗಳೂರು:- ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನವಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ನ್ಯಾಯಾಲಯ 7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸತೀಶ್ ಸೈಲ್ ಉಸಿರಾಟದ ಸಮಸ್ಯೆ, ಡಯಾಬಿಟಿಸ್‌ನಿಂದ ಬಳಲುತ್ತಿದ್ದು, ಕಸ್ಟಡಿಯಲ್ಲಿ ಇದ್ದಾಗ ಅನಾರೋಗ್ಯ ಹಿನ್ನೆಲೆ ಜಾಮೀನು ಮಂಜೂರು ಮಾಡಿದೆ.
ಇನ್ನೂ ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು.



