ಬಲಪಂಥೀಯ ಕಾರ್ಯಕರ್ತರು ನೀಡುವ ಹೇಳಿಕೆಗಳ ಮೇಲೆ ನಿಗಾ ಇಟ್ಟಿದೆ: ಜಿ ಪರಮೇಶ್ವರ

0
Spread the love

ಬೆಳಗಾವಿದ್ವೇಷದ ಭಾಷಣ ಪ್ರಕರಣಗಳನ್ನು ತಡೆಯಲು ಬಲಪಂಥೀಯ ಕಾರ್ಯಕರ್ತರ ಮೇಲೆ ಸರ್ಕಾರ ನಿಗಾ ಇರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ಇದು ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು.

Advertisement

ಚಕ್ರವರ್ತಿ ಸೂಲಿಬೆಲೆ ಅವರಂತಹ ಕಾರ್ಯಕರ್ತರನ್ನು ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದುತ್ವವಾದಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ಬಿಜೆಪಿಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಅಂತಹ ಯಾವುದೇ ಘಟನೆ ವರದಿಯಾಗಿಲ್ಲ. ಆದರೂ ಸರ್ಕಾರ ಬಲಪಂಥೀಯ ಕಾರ್ಯಕರ್ತರು ನೀಡುವ ಹೇಳಿಕೆಗಳ ಮೇಲೆ ನಿಗಾ ಇಟ್ಟಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here