ಬೆಳೆ ಸಮೀಕ್ಷೆ ದಾಖಲಿಸಿ : ರೇವಣಪ್ಪ ಮನಗೂಳಿ

0
Monsoon Crop Survey
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಯ ವಿವರಗಳನ್ನು ಆ್ಯಪ್ ಮೂಲಕ ದಾಖಲಿಸಬಹುದಾಗಿದೆ ಎಂದು ತಾಲೂಕಾ ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪ ಮನಗೂಳಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರೈತರು ಗೂಗಲ್ ಪ್ಲೇಸ್ಟೋರ್‌ನಿಂದ `ಮುಂಗಾರು ರೈತರ ಬೆಳೆ ಸಮೀಕ್ಷೆ 2024’ನ್ನು ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಬಹುದಾಗಿದೆ. ರೈತರು ವಿವರಗಳನ್ನು ಸರಿಯಾಗಿ ದಾಖಲಿಸುವದರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಅತಿವೃಷ್ಟಿ, ಅನಾವೃಷ್ಟಿ ಬೆಳೆ ಹಾನಿ ಪರಿಹಾರ ಪಡೆಯಲು ಪಹಣಿಯಲ್ಲಿ ದಾಖಲಿಸಲು ಇದು ಹೆಚ್ಚು ಅನೂಕೂಲವಾಗಿದೆ. ಆದ್ದರಿಂದ ರೈತರು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಂದಾಯ, ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು, ಟೋಲ್ ಫ್ರೀ ನಂ-18004253553ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here