HomeBengaluru Newsಮುಂಗಾರು ಮತ್ತೆ ಆಕ್ಟಿವ್; ರೈತರಿಗೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಮುಂಗಾರು ಮತ್ತೆ ಆಕ್ಟಿವ್; ರೈತರಿಗೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ.

ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.

ಜುಲೈ 21ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಕಡೆಗಳಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಮತ್ತು ಗುಡ್ಡ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಲಪಾತಗಳು ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ತೆರಳುವವರು ಎಚ್ಚರಿಕೆ ವಹಿಸಬೇಕು.

ಬಲವಾದ ಗಾಳಿ ಬೀಸುವ ಸಮಯದಲ್ಲಿ ಹಳೆಯ ಮರಗಳು, ತಾತ್ಕಾಲಿಕ ಶೆಡ್‌ಗಳು ಹಾಗೂ ಜಾಹೀರಾತು ಫಲಕಗಳ ಬಳಿ ವಾಹನ ನಿಲ್ಲಿಸದಂತೆ ಸೂಚಿಸಲಾಗಿದೆ.

ರೈತರು ಬೆಳೆಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img