ಬೆಂಗಳೂರು:- ಇಷ್ಟು ದಿನ ತಣ್ಣಗಿದ್ದ ವರುಣ ನಾಳೆಯಿಂದ ಮತ್ತೆ ಅಬ್ಬರಿಸಲಿದ್ದಾನೆ. ನಾಳೆಯಿಂದ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ನಾಳೆಯಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.