ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ..
Advertisement
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಮಡಿಕೇರಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿಗೆ ಜೀವ ಕಳೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಒಂದೇ ವಾರದಲ್ಲಿ 103 ಅಡಿಗೆ ಏರಿಕೆಯಾಗಿದೆ.