HomeKarnataka Newsಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದು, ರಾಜ್ಯದ ಕೆಲವೆಡೆ ಮಾತ್ರ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸದ್ಯಕ್ಕೆ ವ್ಯಾಪಕ ಮಳೆಯ ನಿರೀಕ್ಷೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ.13ರಂದು ಗುಡುಗು ಸಹಿತ ಮಳೆ ಸಾಧ್ಯತೆ

ಸೆಪ್ಟೆಂಬರ್‌ 13ರಂದು ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯ ಜೊತೆಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಇದೇ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿತ್ತು. ಒಂದೆರಡು ಕಡೆಗಳಲ್ಲಿ ಮಾತ್ರ ಮಳೆಯಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 2 ಸೆಂ.ಮೀ ಮಳೆ ದಾಖಲಾಗಿದೆ. ಮುಂದಿನ ದಿನಗಳಲ್ಲೂ ಹಲವು ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಇನ್ನು ವಾಯವ್ಯ-ಪಶ್ಚಿಮ ಮಧ್ಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಒಡಿಶಾ–ಉತ್ತರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಹೊಂದಿಕೊಂಡಂತೆ ವಾಯುಭಾರ ಕುಸಿತ ಉಂಟಾಗಿದೆ.

ಇದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಸಮುದ್ರಮಟ್ಟದಿಂದ ಸುಮಾರು 7.6 ಕಿಲೋಮೀಟರ್ ಎತ್ತರದವರೆಗೆ ವಿಸ್ತರಿಸಿದೆ. ಈ ವ್ಯವಸ್ಥೆ ನೈಋತ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಸ್ಪಷ್ಟವಾಗಲಿದೆ.

ನಂತರ ಉತ್ತರ ಕರಾವಳಿ ಆಂಧ್ರಪ್ರದೇಶ–ದಕ್ಷಿಣ ಒಡಿಶಾ ಭಾಗದ ಮೂಲಕ ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img