ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಸಮನ್ವಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸರ್ಕಾರದ ವಿರುದ್ಧ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಜಂಟಿ ಹೋರಾಟದ ಬಗ್ಗೆ ಚರ್ಚಿಸಲಾಯಿತು.
Advertisement
ಬಿಜೆಪಿಯಿಂದ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,
ಶಾಸಕರಾದ ಅರವಿಂದ್ ಬೆಲ್ಲದ್, ಅಶ್ವಥ್ ನಾರಾಯಣ, ಸುನೀಲ್ ಕುಮಾರ್, ಸಿಟಿ ರವಿ ಸೇರಿದಂತೆ ಹಲವು ನಾಯಕರು ಭಾಗಿಯಾದರು. ಜೆಡಿಎಸ್ ಕಡೆಯಿಂದ ಜೆಡಿಎಲ್ ಪಿ ನಾಯಕ ಸುರೇಶ್ ಬಾಬು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.