ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೀಘ್ರದಲ್ಲೇ ಜಿಲ್ಲೆಯಲ್ಲಿ 50 ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
Advertisement
ಕೇಂದ್ರ ಸರ್ಕಾರದಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಬೆಳೆಯಾದ ಹೆಸರು ಕಾಳು ಖರೀದಿಗೆ ಅನುಮೋದನೆ ದೊರೆತಿದ್ದು, ನ್ಯಾಶನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (NAFED) ಮೂಲಕ ಶೀಘ್ರದಲ್ಲೇ ಗದಗ ಜಿಲ್ಲೆಯಲ್ಲಿ 50 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.