ಉಡುಪಿಯಲ್ಲಿ 2.20 ಲಕ್ಷ ಅಧಿಕ ಮಹಿಳೆಯರಿಗೆ ಗೃಹ ಲಕ್ಷ್ಮಿ ಲಾಭ ಸಿಕ್ಕಿದೆ: ಲಕ್ಷ್ಮಿ ಹೆಬ್ಬಾಳ್ಕರ್

0
Spread the love

ಉಡುಪಿ: ಕಳೆದ ಗುರುವಾರದಿಂದ ಗೃಹ ಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆಯಾಗುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೆಲವು ತಾಂತ್ರಿಕ ದೋಷದಿಂದ ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗಿಲ್ಲ. ಆದ್ರೆ ಕಳೆದ ಗುರುವಾರದಿಂದ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗುತ್ತಿದೆ ಹಾಗೂ ಉಡುಪಿ ಜಿಲ್ಲೆಯಲ್ಲಿ 2.20 ಲಕ್ಷ ಅಧಿಕ ಮಹಿಳೆಯರಿಗೆ ಲಾಭ ಸಿಕ್ಕಿದೆ ಎಂದು ಹೇಳಿದ್ದಾರೆ.

Advertisement

ರಾಜ್ಯದ್ದೇ ಪ್ರತ್ಯೇಕ ಕರ್ನಾಟಕ ಶಿಕ್ಷಣ ನೀತಿ ತರಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಿಂದ ಈಗಾಗಲೇ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗಿದೆ. ಬಹು ಧರ್ಮ, ಬಹು ಸಂಸ್ಕೃತಿ, ಬಹು ಭಾಷೆ ಇರುವ ದೇಶಕ್ಕೆ ಏಕ ಸಂಸ್ಕೃತಿ ಹೊಂದುವುದಿಲ್ಲ.

ಸಾಮಾಜಿಕ ಸಾಂಸ್ಕೃತಿಕ ಆರ್ಥಿಕ ವಾಸ್ತವಂಶ ಒಳಗೊಂಡ ಶಿಕ್ಷಣ ನೀತಿಯ ಅಗತ್ಯವಿದೆ ಎಂದು ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಯಿಂದ ಏಳು ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here