ಚೆನ್ನೈ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ಸಂಭವಿಸಿದ ಪ್ರಕರಣದ ಹಿನ್ನೆಲೆ, ಕೋಲ್ಟ್ರಿಫ್ ಕಾಫ್ ಸಿರಪ್ ತಯಾರಿಕಾ ಸಂಸ್ಥೆ ಶ್ರೀಸನ್ ಫಾರ್ಮಾ ಕಂಪನಿಯ ಮಾಲೀಕ ಎಸ್. ರಂಗನಾಥನ್ ನನ್ನು ಬುಧವಾರ ತಡರಾತ್ರಿ ಬಂಧಿಸಲಾಗಿದೆ.
ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ಕೋಲ್ಡ್ರಿಫ್ ಸಿರಪ್ ಅನ್ನು ನಿಷೇಧಿಸಲಾಯಿತು. ಈ ಬೆನ್ನಲ್ಲೇ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾ (Sresan Pharma) ಕಂಪನಿಯ ಮಾಲೀಕ ರಂಗನಾಥನ್ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು.
ಅಂತಿಮವಾಗಿ ಬುಧವಾರ ತಡರಾತ್ರಿ ಚೆನ್ನೈನಲ್ಲಿ ರಂಗನಾಥನ್‌ನನ್ನು ಬಂಧಿಸಲಾಗಿದೆ. ಸಿರಪ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾದ ಬಳಿಕ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ರಂಗನಾಥನ್‌ನನ್ನು ಚೆನ್ನೈನಿಂದ ಛಿಂದ್ವಾರಕ್ಕೆ ಪೊಲೀಸರು ಕರೆ ತರುತ್ತಿದ್ದು, ನಂತರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.