HomeKarnataka Newsವಸತಿ ನಿಲಯದ ಊಟ ಸೇವಿಸಿ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ವಸತಿ ನಿಲಯದ ಊಟ ಸೇವಿಸಿ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

For Dai;y Updates Join Our whatsapp Group

Spread the love

ಯಾದಗಿರಿ: ಗುರುಮಠಕಲ್ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ರಾತ್ರಿ ಊಟ ಸೇವಿಸಿದ ನಂತರ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ, ಭೇದಿ ಮತ್ತು ಹೊಟ್ಟೆನೋವಿನಿಂದ ತೀವ್ರ ಅಸ್ವಸ್ಥರಾಗಿರುವ ಘಟನೆ ಬೆಳಕಿಗೆ ಬಂದಿದೆ.

ರಾತ್ರಿ ಸುಮಾರು 7:30ರ ವೇಳೆ ಚಿಕನ್, ಚಪಾತಿ ಮತ್ತು ಅನ್ನ ಸೇವಿಸಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿನಿಯರಿಗೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಗುರುಮಠಕಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ.

ಒಟ್ಟು 150 ವಿದ್ಯಾರ್ಥಿಗಳಲ್ಲಿ 30ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿರುವುದರಿಂದ ಫುಡ್ ಪಾಯಿಸನ್ ಶಂಕೆ ವ್ಯಕ್ತವಾಗಿದೆ ಎಂದು ಚಿಕಿತ್ಸಕ ವೈದ್ಯರು ತಿಳಿಸಿದ್ದಾರೆ. ತುರ್ತು ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ತಾಲೂಕ ಆಸ್ಪತ್ರೆಯ ವೈದ್ಯರು, ಪಟ್ಟಣದ ಸ್ಥಳೀಯ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರು ಕೂಡ ಸೇರಿಕೊಂಡು ಚಿಕಿತ್ಸೆ ನೀಡಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ, ಎಲ್ಲಾ ವಿದ್ಯಾರ್ಥಿನಿಯರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ, ಜಿಲ್ಲಾ ಆಡಳಿತದ ತಂಡ, ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಾಡಿಯಾ, ಜಿಲ್ಲೆ ಎಸ್‌ಪಿ ಪೃಥ್ವಿಕ್ ಶಂಕರ್, ತಹಸೀಲ್ದಾರ್ ಹಾಗೂ ಇಲಾಖೆಯ ಅಧಿಕಾರಿಗಳು, ಮಧ್ಯರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸಾ ವ್ಯವಸ್ಥೆ ಪರಿಶೀಲಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!