ಭೀಕರ ಕಾಲ್ತುಳಿತಕ್ಕೆ 35 ಕ್ಕೂ ಹೆಚ್ಚು ಮಂದಿ ಸಾವು: ನನ್ನ ಹೃದಯ ಚೂರಾಗಿದೆ ಎಂದ ವಿಜಯ್‌

0
Spread the love

ಚೆನ್ನೈ:- ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಳಪತಿ ವಿಜಯ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ X ಮಾಡಿರುವ ಅವರು, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು ನೋವು ಎಂದು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವೇ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ವಿಜಯ್‌ ತಿಳಿಸಿದ್ದಾರೆ.

ಇನ್ನೂ ತಮಿಳುನಾಡು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಬೃಹತ್‌ ರ‍್ಯಾಲಿ ನಡೆಸಿದ್ದರು. ವಿಜಯ್‌ ನೋಡಲೆಂದು ಲಕ್ಷಾಂತರ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಈ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದೆ.


Spread the love

LEAVE A REPLY

Please enter your comment!
Please enter your name here