ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ನಿಲಯದಲ್ಲಿ ವಿಷಪೂರಿತ ಆಹಾರ ತಿಂದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಳಗಿನ ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು,
Advertisement
ವಾಂತಿ ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. 50ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಜ್ವರ ಹಾಗೂ ವಾಂತಿ, ಭೇದಿ ಕಂಡು ಬಂದಿದ್ದು, ಅಸ್ವಸ್ಥಗೊಂಡ ಮಕ್ಕಳನ್ನು ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. 6ನೇ ತರಗತಿಯಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ.