50 ವಾಹನಗಳ ನಡುವೆ ಸರಣಿ ಅಪಘಾತ: ದೆಹಲಿ – ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ಹಲವರಿಗೆ ಗಾಯ!

0
Spread the love

ಲಕ್ನೋ:- ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ 50 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ.

Advertisement

ಪೊಲೀಸರು ಸಂಚಾರ ದಟ್ಟಣೆಯನ್ನು ತೆರವುಗೊಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ದಟ್ಟವಾದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here