ಬೆಂಗಳೂರು:- ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ಹೀಗಾಗಿ ಕಚೇರಿಗಳಿಗೆ ತೆರಳಲು ವಾಹನ ಸವಾರರು ಪರದಾಟ ನಡೆಸಿದ್ದಾರೆ.
Advertisement
ಇದರ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ನಗರವಾಸಿಗಳು ಮನೆಯಿಂದ ಹೊರಡುವ ಮುನ್ನ ಕೊಡೆ ಹಿಡಿದುಕೊಂಡು ಹೋದರೆ ಉತ್ತಮ.
ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆ ಸೇರಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಜೊತೆಗೆ ಗುಡುಗು ಸಹಿತ ಸುರಿಯಲಿದೆ.
ಇನ್ನು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರ ಮಳೆ ಉಯ್ಯಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಮುನ್ಸೂಚನೆ ಇದೆ.