ಗದಗ:– ಸಾಕಷ್ಟು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ರಾಜ್ಯ ಮತ್ತು ಅಂತರರಾಜ್ಯ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ದರೋಡೆ ಗ್ಯಾಂಗ್ ಬಂಧಿಸುವಲ್ಲಿ ಗದಗ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಜುನಾಥ ಮೊಡಕೆರ್, ಹಾಗೂ ರಮೇಶ್ ಮೊಡಕೆರ್, ಹಾಗೂ ಜಯಸಿಂಹ ಮೊಡಕೆರ್ ಬಂಧಿತರು. ಆದರೆ ಬಂಧನದ ವೇಳೆ ಬಂಧಿತರಲ್ಲಿ ನಟೋರಿಯಸ್ ಆರೋಪಿ ಜಯಸಿಂಹ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಎರಡು ಸುತ್ತು ಫೈರಿಂಗ್ ಮಾಡಿದ್ದಾರೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ಮಧ್ಯೆ ಈ ಘಟನೆ ಜರುಗಿದೆ.
ಪೊಲೀಸರ ಬಲೆಗೆ ಬಿದ್ದ ಗ್ಯಾಂಗ್!
ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ಈ ದರೋಡೆ ಗ್ಯಾಂಗ್, ಮೊಬೈಲ್ ಸಂಪರ್ಕ ಬಿಟ್ಟು ಇನ್ಸ್ಟಾಗ್ರಾಂ ಮೂಲಕ ಸಂಪರ್ಕ ಹೊಂದಿದ್ದರು. ಕೊನೆಗೂ ಖಚಿತ ಮಾಹಿತಿ ಪಡೆದ ಗದಗ ಪೊಲೀಸರು, ದರೋಡೆ ಗ್ಯಾಂಗ್ ಬಲೆಗೆ ಕೆಡುವಲ್ಲಿ ಯಶಸ್ವಿಯಾಗಿದೆ. ಬಂಧಿಸಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿಗಳನ್ನು ಕರೆತರುವಾಗ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಕೈಗೆ ಹಾಕಿದ್ದ ಬೇಡಿಯಿಂದ ಆರೋಪಿ ಜಯಸಿಂಹ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಸಿಪಿಐ ಮಂಜುನಾಥ ಕುಸುಗಲ್ ಅವರು ಆರೋಪಿ ಕಾಲಿಗೆ ಪೈರಿಂಗ್ ಮಾಡಿ ಅರೆಸ್ಟ್ ಮಾಡಿದ್ದಾರೆ.
ಆರೋಪಿ ಜಯಸಿಂಹ ಮೇಲೆ ದರೋಡೆ, ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಿವೆ. ಇನ್ನೂ ಬಂಧಿತ ನಟೋರಿಯಸ್ ದರೋಡೆ ಗ್ಯಾಂಗ್ ಗಾಗಿ ರಾಜ್ಯ ಸೇರಿ ಅಂತರರಾಜ್ಯ ಪೊಲೀಸರು ಕೂಡ ಸಾಕಷ್ಟು ಹುಡುಕಾಟ ನಡೆಸಿದರು. ಅದರಂತೆ ನಿನ್ನೆ ಆರೋಪಿಗಳು ಇರುವಿಕೆಯ ಖಚಿತ ಮಾಹಿತಿ ಪಡೆದು ವಿಜಯನಗರ ಜಿಲ್ಲೆ ಬಳಿ ಗದಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಆಸ್ಪತ್ರೆಗೆ ಬೇಟಿ ನೀಡಿ ಗದಗ ಎಸ್ಪಿ ಬಿ ಎಸ್ ನೇಮಗೌಡ ಪರಿಶೀಲಿಸಿ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಗಾಯಾಳು ಪೊಲೀಸ್ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದ್ದಾರೆ.