ಆನೇಕಲ್: ಕೃಷಿ ಹೊಂಡಕ್ಕೆ ಬಿದ್ದು ತಾಯಿ ಹಾಗೂ ಮಗಳು ಸಾವನ್ನಪ್ಪಿದ ದಾರುಣ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಲಾವಣ್ಯ (28) ಹಾಗೂ ಲಕ್ಷತಾ (8) ಎಂದು ಗುರುತಿಸಲಾಗಿದೆ. ಲಾವಣ್ಯ ಅವರು 2017ರಲ್ಲಿ ಗ್ರಾಮದ ಸಂಪತ್ ಅವರೊಂದಿಗೆ ವಿವಾಹವಾಗಿದ್ದರು.
ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಲಾವಣ್ಯ ಪೋಷಕರು, ತಮ್ಮ ಮಗಳ ಪತಿಯ ವಿರುದ್ಧ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.



