ಕಲ್ಪತರು ನಾಡಿನಲ್ಲಿ ನಿಲ್ಲದ ಅಪಘಾತಗಳು: ಖಾಸಗಿ ಬಸ್ ಡಿಕ್ಕಿ ಹೊಡೆದು ತಾಯಿ, ಮಗಳು ಸಾವು

0
Spread the love

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಯಿ ಕಮಲಮ್ಮ (42) ಮತ್ತು ಮಗಳು ವೀಣಾ (16) ಮೃತರಾಗಿದ್ದು,

Advertisement

ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಗೀತಾಂಜನೇಯ ಹೆಸರಿನ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಪಾದಚಾರಿ ತಲೆಗೂ ತೀವ್ರ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗೆ ತಿಪಟೂರು ಆಸ್ಪತ್ರೆಗೆ ರವಾನಿಸಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here