ಬೆಂಗಳೂರು: ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಆರ್ ಎನ್ ಜೆಡ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಭಾರ್ಗವ್ ಪುಲಿವರ್ತ (೧೩) ವರ್ಷದ ಮಗ ಮೊದಲಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಬಳಿಕ ನೇಣು ಹಿಗಿದುಕೊಂಡು ರಮ್ಯಾ ಜಿ (೪೦) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
ಕಳೆದ ತಿಂಗಳ ಹಿಂದೆ ಗಂಡ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ. ಇದರಿಂದ ಆರ್ಥಿಕ ಪರಿಸ್ಥಿತಿ ನಿಭಾಯಿಸಲಾಗದೇ ತಾಯಿ ತನ್ನ ಮಗನನ್ನು ನೇಣು ಬಿಗಿದು ಕೊಲೆ ಮಾಡಿ, ಆತನ ಹೆಣವನ್ನು ಕೆಳಗಿಳಿಸಿ, ಪುನಃ ತಾನೂ ಅದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ನಂತರ, ಮೃತದೇಹಗಳು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.