HomeKarnataka Newsತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

For Dai;y Updates Join Our whatsapp Group

Spread the love

ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು,

ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ದಸರಾ- ಶಾಂತಿಯ ಹಬ್ಬ, ಸೌಹಾರ್ದದ ಮೇಳ

ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ.

ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ
ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ.

ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ
ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟ ವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ, ಆದರೆ ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು
ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದರು.

ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ
ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ ಎಂದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!