ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಕಂದಮ್ಮಗಳ ಜೊತೆಗೆ ತಾಯಿ ಸೇರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ನಡೆದಿದೆ. ತಾಯಿ ಯಲ್ಲವ್ವಾ ಕರಿಹೊಳ (30) ಪುತ್ರರಾದ ಸಾತ್ವಿಕ (5) ವರ್ಷ, ಮುತ್ತಪ್ಪ (1)ಮೃತ ದುರ್ದೈವಿಗಳಾಗಿದ್ದು,
Advertisement
ಇಂದು ಬೆಳಗ್ಗೆ 8 ಗಂಟೆಗೆ ತಾಯಿ ತನ್ನ ಮಕ್ಕಳೊಂದಿಗೆ ಬಾವಿ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.