ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲಿ ಮತ್ತೆ ವಾಹನ ಟೋಯಿಂಗ್ ಶುರುವಾಗಲಿದೆ. ಈ ಕುರಿತಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಿಲುಗಡೆ ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ಟೋಯಿಂಗ್ ಕಾರ್ಯಾಚರಣೆಯನ್ನು ಆಗಸ್ಟ್ ಅಂತ್ಯದಲ್ಲಿ ನಗರ ಪೊಲೀಸ್ ಇಲಾಖೆ ವತಿಯಿಂದ ಆರಂಭಿಸುತ್ತೇವೆ.
ಬೆಂಗಳೂರಿನ ಕೆಲ ರಸ್ತೆಗಳಲ್ಲಿ ನಿಷೇಧವಿದ್ದರೂ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಸಂಚಾರ ದಟ್ಟಣೆ ಆಗುತ್ತಿದೆ. ಈ ಬಗ್ಗೆ ಜನಜಾಗೃತಿ ಮೂಡಿಸಿದರೂ ಸಮಸ್ಯೆ ಜೀವಂತವಾಗಿ ಉಳಿದಿದೆ. ಹೀಗಾಗಿ, ಬೆಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿಯೇ ಟೋಯಿಂಗ್ ಆರಂಭಿಸುತ್ತೇವೆ. ಟೋಯಿಂಗ್ ಸಂಬಂಧ ಈ ಹಿಂದೆ ಗುತ್ತಿಗೆ ನೀಡಲಾಗಿತ್ತು. ಈ ಬಾರಿ ಬೆಂಗಳೂರು ನಗರ ಪೊಲೀಸರೇ ಟೋಯಿಂಗ್ ಮಾಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ.