ಸಿನಿಮಾ ನಿರ್ದೇಶಕ-ನಿರ್ಮಾಪಕ ಸದಾನಂದ ಸುವರ್ಣ ನಿಧನ!

0
Spread the love

ಮಂಗಳೂರು: ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ನಿಧನರಾಗಿದ್ದಾರೆ. 93ನೇ ವರ್ಷಕ್ಕೆ ಸದಾನಂದ ಇಹಲೋಕ ತ್ಯಜಿಸಿದ್ದಾರೆ.ಸದಾನಂದ ನಿಧನದ ಸುದ್ದಿ ಅವರ ಕುಟುಂಬಕ್ಕೆ ಆಘಾತವುಂಟು ಮಾಡಿದೆ.

Advertisement

ಇನ್ನೂ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಸೇವೆ ಸಲ್ಲಿಸಿರುವ ನಿರ್ಮಾಪಕ ಸದಾನಂದ ಸುವರ್ಣ ನಿಧನಕ್ಕೆ ನಟ, ನಟಿಯರು ಸಂತಾಪ ಸೂಚಿಸಿದ್ದಾರೆ. ಕನ್ನಡ, ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವಿ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದ ಸದಾನಂದ ಸುವರ್ಣ,

ಘಟಶ್ರಾದ್ಧ, ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನೆಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here