ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಮದ್ಯಾಹ್ನ 12.30 ಗಂಟೆಗೆ ಲಕ್ಷ್ಮೇಶ್ವರಕ್ಕೆ ಆಗಮಿಸಲಿದ್ದು, ಪಟ್ಟಣದ ರಂಭಾಪುರಿ ಕಲ್ಯಾಣಮಂಟಪದಲ್ಲಿ ಶಿರಹಟ್ಟಿ ಮಂಡಳ ಮುಖಂಡರು, ಕಾರ್ಯಕರ್ತರು ನೀಡಲಿರುವ ಅಭಿನಂದನೆಯನ್ನು ಸ್ವೀಕರಿಸಲಿದ್ದಾರೆ.
ಸಂಸದರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಲಕ್ಷ್ಮೇಶ್ವರ ನಗರಕ್ಕೆ ಆಗಮಿಸಲಿರುವ ಬೊಮ್ಮಾಯಿಯವರು ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿರಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಶಿರಹಟ್ಟಿ ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಹಾಗೂ ನಗರ ಘಟಕದ ಅಧ್ಯಕ್ಷ ನವೀನ ಬೆಳ್ಳಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.