HomeBengaluru Newsಪಿಎಂಎಫ್‌ಬಿವೈ ಯೋಜನೆಯಡಿ ಬೆಳೆ ವಿಮೆ ಕೊಡಿಸಿ : ಬೊಮ್ಮಾಯಿ

ಪಿಎಂಎಫ್‌ಬಿವೈ ಯೋಜನೆಯಡಿ ಬೆಳೆ ವಿಮೆ ಕೊಡಿಸಿ : ಬೊಮ್ಮಾಯಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ವಿನಂತಿಸಿದ್ದಾರೆ.

ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಸಂಸದ ಬಸವರಾಜ ಬೊಮ್ಮಾಯಿ, ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ.

ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಜವಾಬ್ದಾರಿಯನ್ನು ಹೊಂದಿದ್ದು, ಸದರಿ ಕಂಪನಿಯು ಕೆಲವೊಂದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ಅವರ ಆಕ್ಷೇಪಣೆಗಳಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯು ಸಮರ್ಪಕ ಉತ್ತರವನ್ನು ಸಲ್ಲಿಸಿದೆ. ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂಪನಿ ಎತ್ತಿರುವ ಆಕ್ಷೇಪಗಳು ನ್ಯಾಯಸಮ್ಮತವಾಗಿಲ್ಲ. ಅಲ್ಲದೆ ವಿಮೆ ಪರಿಹಾರ ನೀಡಲು ಅನಗತ್ಯ ವಿಳಂಬ ತಂತ್ರ ಅನುಸರಿಸುತ್ತಿರುವಂತಿದೆ ಎಂದು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ರೈತರು ಈಗಾಗಲೇ ಬರ ಹಾಗೂ ಪ್ರವಾಹದಿಂದ ತತ್ತರಿಸಿದ್ದು, ಇದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ತಾವು ಆಗಸ್ಟ್ 22 ಎಂದು ನಡೆಯುವ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವಯಕ್ತಿಯ ಆಸಕ್ತಿ ವಹಿಸಿ, ರೈತರಿಗೆ ಬೆಳೆ ವಿಮೆ ಪರಿಹಾರ ಕೊಡಿಸಿ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರಿಗೂ ಸಂಸದರು ಪತ್ರ ಬರೆದಿದ್ದು, ರೈತರಿಗೆ ಬೆಳೆ ಪರಿಹಾರ ಕೊಡಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img