ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

0
Spread the love

 ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್  ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದು,

Advertisement

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here