ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್‌ಗೆ ಆಕ್ಷೇಪ ವ್ಯಕ್ತಪಡಿಸಿ ದೂರುದಾರ ಸ್ನೇಹಮಯಿ ಕೃಷ್ಣ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಾದ ಆಲಿಸಿದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ನ್ಯಾಯಾಲಯ ಬಿ ರಿಪೋರ್ಟ್ ಅನ್ನು ಅಂಗೀಕರಿಸಿದರೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ರಿಲೀಫ್ ಸಿಗಲಿದೆ. ಒಂದು ವೇಳೆ ಬಿ ರಿಪೋರ್ಟ್ ತಿರಸ್ಕೃತವಾದರೆ ಪ್ರಕರಣ ಮತ್ತಷ್ಟು ಸಂಕೀರ್ಣವಾಗುವ ಸಾಧ್ಯತೆ ಇದೆ. ಇದೇ ವೇಳೆ, ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದ್ದು, ಅದರ ನಂತರ ಬಿ ರಿಪೋರ್ಟ್ ಕುರಿತು ನ್ಯಾಯಾಲಯದ ಆದೇಶ ಹೊರಬೀಳಲಿದೆ.



