Muda Case: ಮುಡಾ ಕೇಸ್’ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್!

0
Spread the love

ನವದೆಹಲಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ  ಪತ್ನಿ ಅವರಿಗೆ ಸುಪ್ರೀಂ ಕೋರ್ಟ್’ನಿಂದ ಭಾರೀ ರಿಲೀಫ್ ಸಿ್ಕ್ಕಿದೆ. ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಇ.ಡಿ.ಗೆ ಭಾರೀ ಹಿನ್ನಡೆಯಾಗಿದೆ.

Advertisement

ಮುಡಾ ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್​ ಅನ್ನು ಹೈಕೋರ್ಟ್ ರದ್ದುಪಡಿಸಿ ಮಾರ್ಚ್​ 7 ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತು. ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸಂಸ್ಥೆ ಸಲ್ಲಿಸಿದ ಅರ್ಜಿಯ ಬಗ್ಗೆ ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಈ ವಿಷಯದ ಕುರಿತು ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿದರು. ಇಡಿ ಕಾರ್ಯ ವಿಧಾನವನ್ನು ವಿಧಾನವನ್ನು ಪ್ರಶ್ನಿಸಿದ ಪೀಠವು, ಮತದಾರರ ನಡುವೆ ರಾಜಕೀಯ ಹೋರಾಟಗಳನ್ನು ನಡೆಸಲಿ, ಅದಕ್ಕಾಗಿ ನಿಮ್ಮನ್ನು ಏಕೆ ಬಳಸಿಕೊಳ್ಳಲಾಗುತ್ತಿದೆ? ಎಂದು ಇದೇ ವೇಳೆ ಕೇಳಿತು.

ಇಡಿ ವಿರುದ್ಧ ಕೆಲವು ಕಠಿಣ ಟೀಕೆಗಳನ್ನು ಮಾಡಬಹುದು ಎಂಬುದನ್ನು ಪೀಠವು ಗಮನಿಸಿತು. ಮೇಲ್ಮನವಿಯನ್ನು ಸ್ವೀಕರಿಸಲು ಪೀಠವು ಆಸಕ್ತಿ ಹೊಂದಿಲ್ಲ ಎಂಬುದನ್ನು ಗ್ರಹಿಸಿದ ರಾಜು, ಅರ್ಜಿ ಹಿಂಪಡೆಯಲು ಒಪ್ಪಿಕೊಂಡರು.

ಆದರೆ, ಇದನ್ನು ಪೂರ್ವ ನಿದರ್ಶನ ಎಂದು ಪರಿಗಣಿಸಬಾರದು ಎಂದು ಹೆಚ್ಚುವರಿ ಸಾಲಿಸಿಟರ್​ ಜನರಲ್​ ಪೀಠಕ್ಕೆ ಮನವಿ ಮಾಡಿದರು. ಇಡಿ ಸಲ್ಲಿಸಿದ ಮೇಲ್ಮನವಿಯನ್ನು ಸ್ವೀಕರಿಸಲು ನಿರಾಕರಿಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ತಾರ್ಕಿಕ ಕ್ರಿಯೆಯಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಪೀಠ ಇದೇ ವೇಳೆ ಹೇಳಿದೆ.

 

 


Spread the love

LEAVE A REPLY

Please enter your comment!
Please enter your name here