ಮೈಸೂರು:- ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ.
ಲೋಕಾಯುಕ್ತ ಪೊಲೀಸರು, ಮುಡಾದ ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ಅಸಮಾಧಾನ ಹೊರಹಾಕಿದೆ. 6 ತಿಂಗಳಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಾಸಿಕ್ಯೂಷನ್ ಅನುಮತಿ ಎಂದು ತಡವಾಗುತ್ತಿದೆ ಎಂದು ಚಾಟಿ ಬೀಸಿದೆ.



