ಮೈಸೂರು:- ಮುಡಾ ಕೇಸ್ ಸಿಬಿಐಗೆ ಹೋಗೋದು ನಿಶ್ಚಿತ ಎಂದು ದೂರುದಾರ ಸ್ನೇಹಮಹಿ ಕೃಷ್ಣ ಹೇಳಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು, ಮುಡಾ ಹಗರಣ ತನಿಖೆ ಸಂಬಂಧ ಇಂದು ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಲಿದೆ. ಮುಡಾ ಹಗರಣ ತನಿಖೆಯನ್ನು ನ್ಯಾಯಾಲಯ ಸಿಬಿಐಗೆ ಕೊಟ್ಟೇ ಕೊಡುತ್ತದೆ. ಸಿಎಂ ಸಿದ್ದರಾಮಯ್ಯ ನೈತಿಕತೆ ಕಳೆದು ಕೊಂಡಿದ್ದಾರೆ. ಹೀಗಾಗಿ ಅವರಿಗೆ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲ್ಲ. ಬದಲಾಗಿ ಹೈಕಮಾಂಡ್ ಅವರ ರಾಜೀನಾಮೆ ಪಡೆಯುವ ಕ್ಷಣ ಹತ್ತಿರ ಬಂದಿದೆ ಎಂದು ದೂರುದಾರ ಸ್ನೇಹಮಹಿ ಕೃಷ್ಣ ಹೇಳಿದ್ದಾರೆ.
ಸಿದ್ದರಾಮಯ್ಯಗೆ ಮಾತ್ರವಲ್ಲ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಶಿಕ್ಷೆ ಕೊಡಿಸಿಯೇ ಕೊಡಿಸುತ್ತಿನಿ. ಮುಡಾಕ್ಕೆ ಎಲ್ಲಾ ಸೈಟ್ ವಾಪಸ್ ಬರಬೇಕು. ಎಲ್ಲರಿಗೂ ಶಿಕ್ಷೆ ಕೊಡಿಸುವವರೆಗೂ ನಾನು ಹೋರಾಟ ನಿಲ್ಲಿಸಲ್ಲ ಎಂದು ಶಪಥ ಮಾಡಿದ್ದಾರೆ.