ನವದೆಹಲಿ: ಮುಡಾ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ಪತ್ನಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಬಗ್ಗೆ X ಮಾಡಿ ಬಿಜೆಪಿಗೆ ರಣದೀಪ್ ಸಿಂಗ್ ಸುರ್ಜೇವಾಲಾ ತಿರುಗೇಟು ಕೊಟ್ಟಿದ್ದಾರೆ. ಇಡಿ-ಬಿಜೆಪಿ ಪಾಲುದಾರಿಕೆಯ ನಕಲಿ ಪ್ರಚಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಸೃಷ್ಟಿಸಿತ್ತು. ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿತ್ತು. ಸತ್ಯ ಗೆದ್ದಿದೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಮುಡಾ ಹಗರಣ ಆರೋಪದಲ್ಲಿ ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದೆ.
ದುರುದ್ದೇಶಪೂರ್ವಕವಾಗಿ ಸಿಎಂ ವಿರುದ್ಧ ಮುಡಾ ಕುರಿತು ಸುಳ್ಳು ಆರೋಪಗಳನ್ನು ಹೊರಿಸಿತ್ತು. ಇದಕ್ಕೂ ಮುನ್ನ ಹೈಕೋರ್ಟ್ ಪ್ರಕರಣ ರದ್ದುಗೊಳಿಸಿತ್ತು. ಈ ಮೂಲಕ ಇಡಿ-ಬಿಜೆಪಿ ಪಾಲುದಾರಿಕೆಯ ನಕಲಿ ಪ್ರಚಾರವನ್ನು ತಿರಸ್ಕರಿಸಿ ರದ್ದುಗೊಳಿಸಿದೆ ಎಂದು ಬರೆದುಕೊಂಡಿದ್ದಾರೆ.