ಮುಡಾ ಹಣ ವರುಣ ಕ್ಷೇತ್ರದ ಅಭಿವೃದ್ಧಿಗೆ ಬಳಕೆ: CM ವಿರುದ್ಧ ರಾಜ್ಯಪಾಲರಿಗೆ ದೂರು!

0
Spread the love

ಬೆಂಗಳೂರು:- ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

Advertisement

ಸಿಎಂ ಮೌಖಿಕ ಆದೇಶದ ಮೇರೆಗೆ ಕಾನೂನು ಮೀರಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರುಕೊಟ್ಟಿದ್ದಾರೆ.

ಪ್ರಾಧಿಕಾರದ ಸಭೆಯ ಕಡತದಲ್ಲೇ ಈ ವಿಚಾರ ಉಲ್ಲೇಖವಾಗಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದರೂ ಮುಡಾದ 450 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಸೂಚಿಸಬೇಕೆಂದು ಎಂದು ನಟರಾಜ್ ಕೋರಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸೆ.5ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.


Spread the love

LEAVE A REPLY

Please enter your comment!
Please enter your name here