ಬೆಂಗಳೂರು: ಮುಡಾ ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಕೊನೆಗೂ ವರದಿ ಸಿದ್ಧಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಅವರ ಪತ್ನಿಗೆ ಕ್ಲೀನ್ಚಿಟ್ ನೀಡಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ತಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಆ ಬಗ್ಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Advertisement
ನಾನು ದಾವೋಸ್‍ಗೆ ಹೋಗಬೇಕಿತ್ತು, ಆದರೆ ಬಜೆಟ್ ತಯಾರಿ ಇದೆ ಹೀಗಾಗಿ ಹೋಗ್ತಿಲ್ಲ. ಕಳೆದ ವರ್ಷವೂ ನಾನು ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹಾಗೂ ಪೂಜೆ ವಿಚಾರವಾಗಿ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ.