ಬೆಂಗಳೂರು:- ರಾಜಕೀಯ ಆರೋಪ, ಪ್ರತ್ಯಾರೋಪಗಳ ಮಧ್ಯೆ ಮುಡಾ ಹಗರಣದ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ.
Advertisement
ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರ ಆಗುವ ಸಾಧ್ಯತೆ ಇದೆ. ಹೈಕೋರ್ಟ್ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12ಗಂಟೆಗೆ ಮಹತ್ವದ ತೀರ್ಪು ಪ್ರಕಟ ಮಾಡುವ ಸಾಧ್ಯತೆ ಇದೆ. ನ್ಯಾ. ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರ ಬೀಳಲಿದ್ದು, ಇಡೀ ರಾಜ್ಯದ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.
ಸಿಎಂ ಸಿದ್ದರಾಮಯ್ಯ ಕುಟಂಬಸ್ಥರ ಮೇಲೆ ಪ್ರಭಾವ ಬಳಸಿ ಮೈಸೂರಿನ ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆದ ಗಂಭೀರ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಈ ಪ್ರಾಸಿಕ್ಯೂಷನ್ ಅನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.