ಮುಡಾ ಹಗರಣ: ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ CM ಸಿದ್ದು ಸ್ಪಷ್ಟನೆ!

0
Spread the love

ಕೊಡಗು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ CM ಸಿದ್ದು ಸ್ಪಷ್ಟನೆ ಕೊಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಹೆಚ್ಚಾಗಿದೆ. 20ಕ್ಕೂ ಹೆಚ್ಚು ಕಡೆ ಭೂಕುಸಿತವಾಗಿದೆ. ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ, ಕೆಲವರಿಗೆ ಗಾಯಗಳಾಗಿವೆ. ಮಳೆ ನಿಂತ ತಕ್ಷಣ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಕೊಡಲಾಗುವುದು ಎಂದಿದ್ದಾರೆ.

67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂ. ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂದು ತಿಳಿಸಿದ್ದಾರೆ.

16 ಜಾನುವಾರು ಸತ್ತಿವೆ. ತಲಾ 35 ಸಾವಿರ ರೂ. ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದಾರೆ. 28 ಹೆಕ್ಟೇರ್​ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ ಎಂದರು.

344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುತ್ತೇನೆ. ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು ಎಂದಿದ್ದಾರೆ.

ಶೋಕಾಸ್ ನೋಟಿಸ್​ ವಿಚಾರವಾಗಿ ಮಾತನಾಡಿದ ಅವರು, ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ನೋಟಿಸ್ ಹಿಂಪಡೆಯುವಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಬ್ರಹಾಂ ನೀಡಿರುವ ದೂರು ತಿರಸ್ಕರಿಸುವಂತೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here