ಬೆಂಗಳೂರು: ಮುಡಾಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಹಕಾರಿ ಸಂಘ, ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಸುಮಾರು 100 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಯನ್ನ ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್‌ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಐಪಿಸಿ, 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು. ಇದೀಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇಡಿ ಉಲ್ಲೇಖಿಸಿದೆ.