ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
Advertisement
ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಗಲಿ ಇತರ ವಿಚಾರಣಾ ಸಂಸ್ಥೆಯಿಂದ ನೋಟಿಸ್ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್ ಸ್ವೀಕರಿಸಿದ್ದಾರೆ.
ನವೆಂಬರ್ 6 ಬುಧವಾರ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.