ಮುಡಾ ಹಗರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ

0
Spread the love

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.  ಹೌದು   ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 23ಕ್ಕೆ ನಿಗದಿಪಡಿಸಿದೆ.

Advertisement

ಹೈಕೋರ್ಟ್‌ನ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ ಪೀಠಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ, ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ, ಈವರೆಗೂ ವಿಚಾರಣೆಗೆ ನಿಗದಿಯಾಗಿಲ್ಲ. ಅಲ್ಲದೆ, ಮೇಲ್ಮನವಿ ವಿಚಾರಣೆ ತುರ್ತಾಗಿದ್ದು, ಶೀಘ್ರದಲ್ಲಿ ವಿಚಾರಣೆಗೆ ನಿಗದಿ ಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಇದೇ 23ಕ್ಕೆ ವಿಚಾರಣೆಗೆ ನಿಗದಿಪಡಿಸಿತು.

ಡಿಸೆಂಬರ್‌ 24ರ ಒಳಗೆ ತನಿಖಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್‌ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.


Spread the love

LEAVE A REPLY

Please enter your comment!
Please enter your name here