ಬೆಂಗಳೂರು: ಹೈಕೋರ್ಟ್‌ನಲ್ಲಿ ಮುಡಾ ಹಗರಣದ ವಿಚಾರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟಂಬರ್ 12ರ ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಇಂದೂ ಕೂಡಾ ವಿಚಾರಣೆ ನಡೆಸಿತು.
Advertisement
ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಅಲ್ಲಿಯವರೆಗೆ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.