HomeKarnataka Newsಮುಡಾ ಹಗರಣ: ಅತಿದೊಡ್ಡ ಸಾಕ್ಷ್ಯ ಕಲೆ ಹಾಕಿದ ಇಡಿ, CM ಸಿದ್ದುಗೆ ಸಂಕಷ್ಟ ಫಿಕ್ಸ್!

ಮುಡಾ ಹಗರಣ: ಅತಿದೊಡ್ಡ ಸಾಕ್ಷ್ಯ ಕಲೆ ಹಾಕಿದ ಇಡಿ, CM ಸಿದ್ದುಗೆ ಸಂಕಷ್ಟ ಫಿಕ್ಸ್!

For Dai;y Updates Join Our whatsapp Group

ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು ಅತೀ ದೊಡ್ಡ ಸಾಕ್ಷ್ಯವನ್ನೇ ಕಲೆ ಹಾಕಿದ್ದಾರೆ.

ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ.

ಮನವಿ ಪತ್ರದಲ್ಲಿ ವೈಟ್ನರ್ ಹಾಕಿರುವುದು ಪತ್ತೆಯಾಗಿದೆ. ಮನವಿ ಪತ್ರದ 2ನೇ ಪುಟದಲ್ಲಿದ್ದ ಖಾಲಿ ಜಾಗಕ್ಕೆ ವೈಟ್ನರ್ ಹಾಕಲಾಗಿತ್ತು. ಆದರೆ, ಇದರ ಮಧ್ಯೆಯೇ ವೈಟ್ನರ್ ಹಾಕದಿರುವ ಪತ್ರ ಕೂಡ ಇಡಿ ಅಧಿಕಾರಿಗಳಿಗೆ ಸಿಕ್ಕಿದೆ.

ವೈಟ್ನರ್ ಹಾಕಿದ ದಾಖಲೆಯಿಂದಲೇ ಸಿದ್ದರಾಮಯ್ಯಗೆ ಸಂಕಷ್ಟ ತರಲಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಸಿಎಂ ಬಿಡುಗಡೆ ಮಾಡಿರುವ ದಾಖಲೆ ಹಾಗೂ ಆರ್​ಟಿಐನಲ್ಲಿ ನೀಡಿದ್ದ ದಾಖಲೆ ಬೇರೆ ಬೇರೆ ಇದೆ.

ವೈಟ್ನರ್​ನಲ್ಲೂ ವ್ಯತ್ಯಾಸ ಕಂಡು ಬಂದಿದೆ. ಇದಿಷ್ಟೇ ಅಲ್ಲ, 2 ದಾಖಲೆಗಳಲ್ಲಿ ಸಿಎಂ ಪತ್ನಿಯ ಸಹಿಯಲ್ಲಿಯೂ ವ್ಯತ್ಯಾಸ ಕಂಡು ಬಂದಿದೆ ಎನ್ನಲಾಗಿದೆ. ಎರಡೂ ದಾಖಲೆಗಳನ್ನು ಮುಂದಿಟ್ಟುಕೊಂಡು ಮುಡಾ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಅಸಲಿ ಪತ್ರ ಯಾವುದು, ನಕಲಿ ಯಾವುದು ಎಂದು ಅಧಿಕಾರಿಗಳ ಬಾಯಿಬಿಡಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img