ಮುಡಾ ಹಗರಣ: ತನಿಖೆಯನ್ನು ಸಿಬಿಐಗೆ ನೀಡಿದರೆ ಮಾತ್ರ ಸತ್ಯ ಬಹಿರಂಗವಾಗಲಿದೆ – ಯತ್ನಾಳ್

0
Spread the love

ವಿಜಯಪುರ: ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ನೀಡಿದರೆ ಮಾತ್ರ ಸತ್ಯ ಬಹಿರಂಗವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ನೀಡಿದರೆ ಮಾತ್ರ ಸತ್ಯ ಬಹಿರಂಗವಾಗಲಿದೆ. ಹೀಗಾಗಿ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಈ ಪ್ರಕರಣ ಸರಿಯಾಗಿ ತನಿಖೆಯಾದ್ರೆ ಸಿಎಂ ಸಿದ್ದರಾಮಯ್ಯ ದಲಿತ ಹಾಗೂ ಕಾಂಗ್ರೆಸ್ ವಿರೋಧಿ ಎಂಬುದು ಬಹಿರಂಗವಾಗುತ್ತದೆ ಎಂದು ಅವರು ಹೇಳಿದ್ದಾರೆ.

Advertisement

ಇನ್ನೂ ರಾಜು ಯಾರ ಶಿಷ್ಯ ಎಂದು ವಿಜಯೇಂದ್ರ ಹೇಳಬೇಕು. ಲೋಕಸಭೆ ಚುನಾವಣೆ ವೇಳೆ ರಾಜು ಯಾಕೆ ಕಾಂಗ್ರೆಸ್ ಸೇರಿದ್ದು? ರಾಜಕೀಯ ಹೊಂದಾಣಿಕೆಗಾಗಿ ಮಾಡಿದ ತಂತ್ರ ಇದು. ಮೈಸೂರು, ಚಾಮರಾಜನಗರ ಗೆಲ್ಲಲು ಕಾಂಗ್ರೆಸ್‌ಗೆ ಪರೋಕ್ಷವಾಗಿ ಬೆಂಬಲ ನೀಡಲು ಸೇರಿದ್ದು. ಅಲ್ಲದೇ ಸಿದ್ದರಾಮಯ್ಯ ನೇತೃತ್ವದಲ್ಲಿ ಇದನ್ನೆಲ್ಲ ಮುಚ್ಚಿ ಹಾಕಲು ಕಾಂಗ್ರೆಸ್ ಸೇರಿದ್ದಾನೆ. ಇದು ರಾಜು ಬಿಜೆಪಿಯಲ್ಲಿದ್ದಾಗಲೇ ಆದ ಹಗರಣ ಎಂದು ಅವರು ಆರೋಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here