ಮುಡಾ ಹಗರಣ: ರಾಜೀನಾಮೆ ನೀಡದ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ – ಜಗದೀಶ್ ಶೆಟ್ಟರ್!

0
Spread the love

ಬೆಳಗಾವಿ:-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಇನ್ನೂ ಕೂಡ ರಾಜೀನಾಮೆ ನೀಡಿಲ್ಲ. ಹೀಗಾಗಿ ಅವರಿಗೆ ನೈತಿಕತೆ ಇಲ್ಲ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ.

Advertisement

ಬೆಳಗಾವಿಯ ತಮ್ಮ ನೂತನ ಕಚೇರಿಯಲ್ಲಿ ಪೂಜೆ ನೆರವೇರಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜಕೀಯವಾಗಿ ನಾಲ್ಕು ದಿನ ವಿಳಂಬ ಆಗಬಹುದು. ಇವತ್ತಿಲ್ಲಾ ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಹೊಸ ಸಿಎಂ ಯಾರು ಅನ್ನೋದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ ಎಂದರು.

ಈ ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ರೀತಿಯ ಆಪರೇಷನ್ ಕಮಲ ಮಾಡುತ್ತಿಲ್ಲ. ಅವರ ಸ್ವಯಂಕೃತ ಅಪರಾಧದಿಂದ ಸರ್ಕಾರ ಬಿದ್ದು ಹೋಗಲಿದೆ. ಈಗಾಗಲೇ 8 ಜನ ಸಿಎಂ ಆಗಲೂ ತಯಾರಿದ್ದಾರೆ. ಅವರಲ್ಲಿ ಆಂತರಿಕ ಪೈಪೋಟಿ ನಡೆಯುತ್ತಿದೆ. ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಡಿಸಿಎಂ ಆದ ದಿನದಿಂದಲೇ ಒಳ ಜಗಳ ಇದೆ. ಆ ಒಳಜಗಳದಿಂದಲೇ ಈ ಸರ್ಕಾರ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು.

ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರ್ತಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯಾಧ್ಯಕ್ಷರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅವರಿಗೆ ಬಿಟ್ಟ ವಿಚಾರ. ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ, ಮುಡಾ ಪ್ರಕರಣ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ. ತಪ್ಪು ಮಾಡಿರೋದು ಗೊತ್ತಿದೆ. ಲೋಕಾಯುಕ್ತ ತನಿಖೆ ಆಗ್ತಿದೆ. ಇಷ್ಟಾದ್ರು ಸಿಎಂ ಆಗಿ ಮುಂದುವರೆದಿರೋ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. ಇದು ಬಂಡತನದ ಪರಮಾವಧಿ ಎಂದು ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here