HomeGadag Newsಕೆಸರಿನ ಸಂಪ್ರದಾಯದಲ್ಲಿ ಮೆರೆದ ಮೊಹರಂ ಭಾವೈಕ್ಯ

ಕೆಸರಿನ ಸಂಪ್ರದಾಯದಲ್ಲಿ ಮೆರೆದ ಮೊಹರಂ ಭಾವೈಕ್ಯ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಸೌಹಾರ್ದತೆಯ ಸಂಕೇತವಾದ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಸೌಹಾರ್ದತೆಯ ಸಂಕೇತವಾದ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಹಜರತ್ ಇಮಾಮ್ ಹುಸೇನ್ ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಅಂಗವಾಗಿ ಗ್ರಾಮದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮೊಹರಂ ಅಂಗವಾಗಿ ಪೀರರ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಲೈ ದೇವರಿಗೆ ಪೂಜೆ ಸಲ್ಲಿಸಲಾಯಿತು.

ತಿಮ್ಮಾಪೂರದ ವಿಶೇಷ ಸಂಪ್ರದಾಯದಂತೆ ಯುವಕರು ಅಗ್ನಿಕುಂಡದ ಸಮೀಪ ನೀರು ಸುರಿದು ಕೆಸರು ಮಾಡಿ ಅದರಲ್ಲಿ ಆಡುವ ಮೂಲಕ ದಶಕಗಳಿಂದ ನಡೆದುಕೊಂಡು ಬಂದಿರುವ ಆಚರಣೆಯನ್ನು ಮುಂದುವರಿಸಿದರು. ಈ ವಿಶಿಷ್ಟ ಸಂಪ್ರದಾಯವನ್ನು ನೋಡಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಮೊಹರಂ ಆಚರಣೆಯಲ್ಲಿ ಹಿಂದೂ–ಮುಸ್ಲಿಂ ಬಾಂಧವರು ಯಾವುದೇ ಭೇದಭಾವವಿಲ್ಲದೆ ಒಂದಾಗಿ ಪಾಲ್ಗೊಂಡು ಭಾವೈಕ್ಯತೆ ಮೆರೆದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img