ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ ನಿಧನ!

0
Spread the love

ಹೈದರಾಬಾದ್: 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಇಂದು ಬೆಳಗಿನ ಜಾವ 4 ಗಂಟೆಗೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

Advertisement

ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆಯನ್ನು ಮೆರೆದಿದ್ದ ಕೋಟ ಶ್ರೀನಿವಾಸ ರಾವ್, ತೆಲುಗು, ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಖಳನಾಯಕ, ಪೋಷಕ ನಟ ಹಾಗೂ ಹಾಸ್ಯಪಾತ್ರಗಳಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಮನಗೆದ್ದಿದ್ದರು.

ಹಿರಿಯ ನಟನ ನಿಧನದಿಂದ ಇಡೀ ಚಿತ್ರರಂಗದಲ್ಲಿ ಶೋಕದ ಛಾಯೆ ಮೂಡಿದೆ. ಮೂಲಗಳ ಪ್ರಕಾರ, ಪುತ್ರನ ನಿಧನದ ನಂತರ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ರಂಗಭೂಮಿಯಿಂದ ಬಂದ ಈ ಕಲಾವಿದ ತಮ್ಮ ವಿಶಿಷ್ಟ ಅಭಿನಯ ಶೈಲಿಯಿಂದ ಸಿನಿಪ್ರೇಮಿಗಳ ಮನಗೆದ್ದಿದ್ದರು. ಖ್ಯಾತ ನಟ ಮೋಹನ್ ಬಾಬು ಅವರೊಂದಿಗೆ ಮಾತ್ರವೇ ಅವರು ಸುಮಾರು 60 ಚಿತ್ರಗಳಲ್ಲಿ ಅಭಿನಯಿಸಿದ್ದರು.


Spread the love

LEAVE A REPLY

Please enter your comment!
Please enter your name here