HomeGadag Newsಒಂದೇ ವೇದಿಕೆಯಲ್ಲಿ ಹಲವಾರು ಆಯ್ಕೆಗೆ ಅವಕಾಶ

ಒಂದೇ ವೇದಿಕೆಯಲ್ಲಿ ಹಲವಾರು ಆಯ್ಕೆಗೆ ಅವಕಾಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಾಲುಮತ ಮಹಾಸಭಾ ಜಿಲ್ಲಾ ಘಟಕ ಹಾಗೂ ಪ್ರದೇಶ ಕುರುಬರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಗಸ್ಟ್ 3ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮುಳಗುಂದ ರಸ್ತೆಯಲ್ಲಿರುವ ಶ್ರೀ ಕನಕ ಭವನದಲ್ಲಿ ಹಾಲುಮತ (ಕುರುಬ) ಸಮಾಜದ 7ನೇ ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹಾಗೂ ಗದಗ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಿಂದ ಸುಮಾರು 250ಕ್ಕೂ ಹೆಚ್ಚು ವಧು-ವರರು ಆಗಮಿಸಲಿದ್ದಾರೆ. ಈ ಸಮಾವೇಶದಲ್ಲಿ ವಧು-ವರರಿಗೆ ಹಾಲುಮತದ ಸಂಪ್ರದಾಯದಂತೆ ಉಡಿತುಂಬಿ ಪರಿಚಯಿಸಲಾಗುವದು. ಇದೇ ಸಂದರ್ಭದಲ್ಲಿ ಸಮಾಜದ ಐವರು ಹಿರಿಯರಿಗೆ ಜೀವಮಾನ ಸಾಧನೆಗಾಗಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಈ ಸಮಾವೇಶದಲ್ಲಿ ಬೇರೆ ಬೇರೆ ಊರುಗಳಿಂದ ವಧು-ವರರು ಆಗಮಿಸುವದರಿಂದ ಒಂದೇ ವೇದಿಕೆಯಲ್ಲಿ ಹಲವಾರು ಆಯ್ಕೆಗಳಿಗಾಗಿ ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಪಾಲಕರಿಗೆ ಸಮಯದ ಉಳಿತಾಯ ಹಾಗೂ ಸೂಕ್ತ ವಧು-ವರರನ್ನು ಆಯ್ಕೆ ಮಾಡುವ ಸದವಕಾಶವನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಈಗಾಗಲೇ ಹೆಸರು ನೋಂದಣಿ ಕಾರ್ಯ ಆರಂಭವಾಗಿದ್ದು, ಆಸಕ್ತರು ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿ ಶ್ರೀ ಬನಶಂಕರಿ ದೇವಿ ದೇವಸ್ಥಾನದ ಆವರಣ ಗಂಗಾಪುರ ಪೇಟೆ ಗದಗದಲ್ಲಿ ಸದಸ್ಯತ್ವ ಶುಲ್ಕದೊಂದಿಗೆ ಹೆಸರನ್ನು ನೋಂದಾಯಿಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರದೇಶ ಕುರುಬ ಸಂಘದ ಗದಗ ತಾಲೂಕಾಧ್ಯಕ್ಷ ನಾಗಪ್ಪ ಗುಗ್ಗರಿ, ಹಾಲುಮತ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮಾ ದ್ಯಾವನೂರ, ಕುರುಬರ ಸಂಘದ ರಾಜ್ಯ ನಿರ್ದೇಶಕಿ ಚನ್ನಮ್ಮ ಹುಳಕಣ್ಣವರ, ಹಾಲುಮತ ಮಹಾಸಭಾದ ಜಿಲ್ಲಾ ಗೌರವಾಧ್ಯಕ್ಷ ನಾಗರಾಜ ಮೆಣಸಗಿ, ಜಿಲ್ಲಾಧ್ಯಕ್ಷ ಬಸವರಾಜ ನೀಲಗಾರ, ಉಪಾಧ್ಯಕ್ಷ ಸೋಮನಗೌಡ ಪಾಟೀಲ, ರಾಘು ವಗ್ಗನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತು ಜಡಿ, ಸತೀಶ ಗಿಡ್ಡಹನಮಣ್ಣವರ, ಮಂಜುನಾಥ ಜಡಿ, ಹೇಮಂತ ಗಿಡ್ಡಹನಮಣ್ಣವರ, ಉಮೇಶ ಪೂಜಾರ, ಬಸವರಾಜ ಕುರಿ, ಕುಮಾರ ಮಾರನಬಸರಿ, ರವಿ ವಗ್ಗನವರ ಮುಂತಾದವರು ಉಪಸ್ಥಿತರಿದ್ದರು.

ನೋಂದಣಿಗಾಗಿ ವೆಂಕಟೇಶ ಇಮರಾಪೂರ-9742842133 ಮುತ್ತು ಜಡಿ-9880831983 ಅವರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ನಾಗರಾಜ ಮೆಣಸಗಿ-9448746400, ಬಸವರಾಜ ನೀಲಗಾರ-8970974959, ಸೋಮನಗೌಡ ಪಾಟೀಲ-9845636775 ಅವರನ್ನು ಸಂಪರ್ಕಿಸಬಹುದು ಎಂದು ರುದ್ರಣ್ಣ ಗುಳಗುಳಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!