HomeSports NewsWPL 2025: ರಣರೋಚಕ ಪಂದ್ಯದಲ್ಲಿ ಸ್ಮೃತಿ ಪಡೆಗೆ ಸೋಲುಣಿಸಿದ ಮುಂಬೈ ಇಂಡಿಯನ್ಸ್!

WPL 2025: ರಣರೋಚಕ ಪಂದ್ಯದಲ್ಲಿ ಸ್ಮೃತಿ ಪಡೆಗೆ ಸೋಲುಣಿಸಿದ ಮುಂಬೈ ಇಂಡಿಯನ್ಸ್!

For Dai;y Updates Join Our whatsapp Group

Spread the love

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆದ WPL ಪಂದ್ಯದಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಿದ್ದವು.

ಸತತ ಎರಡು ಪಂದ್ಯಗಳಿಂದ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ವಿಕೆಟ್​ಗಳಿಂದ ಸೋಲಿಸುವ ಮೂಲಕ ಮುಂಬೈ ಇಂಡಿಯನ್ಸ್ ಡಬ್ಲ್ಯುಪಿಎಲ್​ನಲ್ಲಿ 2ನೇ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವ್ಯಾಟ್-ಹಾಡ್ಜ್ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟವನ್ನಾಡಿದರು. ಅದರಲ್ಲೂ ನಾಯಕಿ ಸ್ಮೃತಿ ಮಂಧಾನ ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾಗಿ 4 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಬಾರಿಸಿದರು. ಆದರೆ ಬೇಡದ ಶಾಟ್ ಆಡಿ ಮೂರನೇ ಓವರ್​ನಲ್ಲೇ 26 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಡೇನಿಯಲ್ ವ್ಯಾಟ್ ಕೂಡ 9 ರನ್​ಗಳಿಗೆ ಸುಸ್ತಾದರು.

ಆದರೆ ಮೂರನೇ ಕ್ರಮಾಂಕದಲ್ಲಿ ಬಂದ ಎಲ್ಲಿಸ್ ಪೆರ್ರಿ ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿ ಸ್ಕೋರ್ ಬೋರ್ಡ್​ ಏರಿಸಲಾರಂಭಿಸಿದರು. ಆದರೆ ಪೆರ್ರಿಗೆ ನಾಲ್ಕನೇ ಮತ್ತು ಐದನೇ ಕ್ರಮಾಂಕದಲ್ಲಿ ಬಂದ ಬ್ಯಾಟರ್​ಗಳಿಂದ ಸಾಥ್ ಸಿಗಲಿಲ್ಲ. ಈ ವೇಳೆ 6ನೇ ಕ್ರಮಾಂಕದಲ್ಲಿ ಬಂದ ರಿಚಾ ಘೋಷ್, ಪೆರ್ರಿ ಜೊತೆ ಅರ್ಧಶತಕದ ಜೊತೆಯಾಟವನ್ನಾಡಿದರು. ಆದರೆ 28 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.

ತಂಡದಲ್ಲಿ ಸತತ ವಿಕೆಟ್ ಪತನದ ನಡುವೆಯೂ ಎಂದಿನಂತೆ ತನ್ನ ಹೊಡಿಬಡಿ ಆಟವನ್ನು ಮುಂದುವರೆಸಿದ ಪೆರ್ರಿ ಕೇವಲ 30 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕ ಇನ್ನಷ್ಟು ಉಗ್ರರೂಪ ತಾಳಿದ ಪೆರ್ರಿ ಮುಂಬೈ ಬೌಲರ್​ಗಳ ಬೆವರಿಳಿಸಿದರು. ಪೆರ್ರಿ ಆರ್ಭಟ ಹೇಗಿತ್ತೆಂದರೆ, ಕೊನೆಯ 5 ಓವರ್​ಗಳಲ್ಲಿ ಆರ್​ಸಿಬಿ ಬರೋಬ್ಬರಿ 54 ರನ್ ಕಲೆಹಾಕಿತು. ಇಷ್ಟು ರನ್​ಗಳಲ್ಲಿ ಪೆರ್ರಿ ಅವರ ಪಾಲೇ ಹೆಚ್ಚಿತ್ತು. ಅಂತಿಮವಾಗಿ 20ನೇ ಓವರ್​ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಪೆರ್ರಿ ವಿಕೆಟ್ ಒಪ್ಪಿಸಿದರು. ಆದರೆ ಔಟಾಗುವುದಕ್ಕೂ ಮುನ್ನ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವ ಕೆಲಸ ಮಾಡಿದ್ದ ಪೆರ್ರಿ ಅಂತಿಮವಾಗಿ 43 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಹಿತ 81 ರನ್ ಕಲೆಹಾಕಿದರು. ಈ ಮೂಲಕ 7 ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ಮುಂಬೈ 19.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿ ಗೆದ್ದು ಬೀಗಿತು. ನಾಯಕಿ ಹರ್ಮನ್​ಪ್ರೀತ್ ಕೌರ್ (50), ಅಮನ್ಜೋತ್​​ ಕೌರ್ (34*)​ ಅಬ್ಬರದ ಆಟವಾಡಿ ತವರಿನಲ್ಲಿ ಆರ್​​ಸಿಬಿ ಗೆಲುವಿನ ಕನಸನ್ನು ಭಗ್ನಗೊಳಿಸಿದರು. ಬ್ಯಾಟಿಂಗ್ ಜತೆಗೆ ಬೌಲಿಂಗ್​ನಲ್ಲೂ (3 ವಿಕೆಟ್) ಮಿಂಚಿದ ಅಮನ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ದೊರೆಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!